ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಸುಗಮ ಕಲಾಪ ಸಹಕಾರಕ್ಕೆ ಪ್ರಧಾನಿ ಮೋದಿ ಮನವಿ.
10:53 AM Jan 31, 2024 IST
|
prashanth
ಬೆಂಗಳೂರು,ಜನವರಿ,31,2024(www.justkannada.in): ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪ ಸಹಕರಿಸುವಂತೆ ವಿಪಕ್ಷಗಳ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ಇಂಧಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ನಾಳೆ ಸಂಸತ್ ನಲ್ಲಿ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ.
ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಅಧಿವೇಶನದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ. ಸುಗಮ ಕಲಾಪಕ್ಕೆ ವಿಪಕ್ಷಗಳ ನಾಯಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
Key words: Parliament-budget –session-today-PM Modi
Next Article