For the best experience, open
https://m.justkannada.in
on your mobile browser.

ಪೆನ್ ಡ್ರೈವ್ ಪ್ರಕರಣ: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ- ಅರಗ ಜ್ಞಾನೇಂದ್ರ.

05:18 PM May 08, 2024 IST | prashanth
ಪೆನ್ ಡ್ರೈವ್ ಪ್ರಕರಣ  ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ  ಅರಗ ಜ್ಞಾನೇಂದ್ರ

ಶಿವಮೊಗ್ಗ, ಮೇ,8,2024 (www.justkannad.in): ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪೆನ್ ಡ್ರೈವ್ ಹಂಚಿದವರನ್ನು ಸರ್ಕಾರ ಗಮನಿಸುತ್ತಿಲ್ಲ. ಇಂತಹ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ ನಡೆಸಲಾಗುತ್ತಿದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅರಗ ಜ್ಞಾನೇಂದ್ರ,   ಪ್ರಕರಣವನ್ನು ಎಸ್‌ಐಟಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಪೆನ್ ಡ್ರೈವ್ ವಿತರಣೆ ಮಾಡಿದವರು ಕೂಡ ಅಷ್ಟೇ ದೊಡ್ಡ ಅಪರಾಧಿಗಳು. ಎಸ್‌ಐಟಿ ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲ. ಸಿಎಂ, ಡಿಸಿಎಂ ಮಾರ್ಗದರ್ಶನದಲ್ಲಿ ಈ ತನಿಖೆ ನಡೆಯುತ್ತಿದೆ. ಕೂಡಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ ನಡೆಯುತ್ತಿದೆ. ಈ ಪ್ರಕರಣದ ಹಿಂದೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಇದ್ದಾರೆ. ಪೆನ್ ಡ್ರೈವ್ ಹೊರಗಡೆ ಬಿಟ್ಟಿದ್ದು ಸಹ ಅಷ್ಟೇ ದೊಡ್ಡ ತಪ್ಪು. ಎಸ್‌ಐಟಿ ಒತ್ತಡದಲ್ಲಿ ತನಿಖೆ ಮಾಡುತ್ತಿದೆ ಎಂದು ಅರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Key words: Pen Drive, Case, Araga Jnanendra, SIT

Tags :

.