ಪೆನ್ ಡ್ರೈವ್ ಪ್ರಕರಣ ಸಿಬಿಐಗೆ ವಹಿಸಲಿ- ಸಿಎಂ, ಡಿಸಿಎಂ ರಾಜೀನಾಮೆಗೆ ಶಾಸಕ ಜಿ.ಟಿ ದೇವೇಗೌಡ ಆಗ್ರಹ.
ಮೈಸೂರು,ಮೇ,8,2024 (www.justkannada.in): ಜೆಡಿಎಸ್ ಪಕ್ಷವನ್ನು ಮುಗಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸಂಚು ರೂಪಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಿ . ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಆಗ್ರಹಿಸಿದರು.
ಪೆನ್ ಡ್ರೈವ್ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡ ಆರೋಪ, ಪ್ರಕರಣವನ್ನ ಸಿಬಿಐ ತನಿಖೆಗೆ ಒತ್ತಾಯಿಸಿ ಜೆಡಿಎಸ್ ಇಂದು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿತು. ಮೈಸೂರಿನಲ್ಲಿ ಶಾಸಕ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಜೆಡಿಎಸ್ ಪಕ್ಷವನ್ನು ಮುಗಿಸಲು ಸಂಚು ನಡೆಸಿದ್ದಾರೆ. ಒಂದು ಪಕ್ಷವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಗದಾ ಪ್ರಹಾರ ನಡೆಸಿದ್ದು, ಪೆನ್ ಡ್ರೈವ್ ಪ್ರಕರಣದಲ್ಲಿ ಅಂತರಾಷ್ಟ್ರೀಯ ಜಾಲವೂ ಒಳಗೊಂಡಿದೆ. ಹೀಗಾಗಿ ಕರ್ನಾಟಕ ಪೊಲೀಸರು ಇದನ್ನು ತನಿಖೆ ನಡೆಸಲು ಆಗುವುದಿಲ್ಲ. ಕೂಡಲೇ ಪ್ರಕರಣವನ್ನ ಸಿಬಿಐಗೆ ವಹಿಸಲಿ ಎಂದರು.
Key words: pendrive case,CBI, MLA, GT Deve Gowda, mysore