For the best experience, open
https://m.justkannada.in
on your mobile browser.

ಕೇಂದ್ರದ ಸರ್ವಾಧಿಕಾರ ಧೋರಣೆ ವಿರುದ್ದ ದೇಶದ ಜನತೆ ಹೋರಾಟ ನಡೆಸುವುದು ಅನಿವಾರ್ಯ-ಸಚಿವ ದಿನೇಶ್ ಗುಂಡೂರಾವ್.

12:23 PM Dec 23, 2023 IST | prashanth
ಕೇಂದ್ರದ ಸರ್ವಾಧಿಕಾರ ಧೋರಣೆ ವಿರುದ್ದ ದೇಶದ ಜನತೆ ಹೋರಾಟ ನಡೆಸುವುದು ಅನಿವಾರ್ಯ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು,ಡಿಸೆಂಬರ್,23,2023(www.justkannada.in): ಸಂಸತ್ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳ 140ಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿದನ್ನ ಖಂಡಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೇಂದ್ರದ ಸರ್ವಾಧಿಕಾರ ಧೋರಣೆ ವಿರುದ್ದ ದೇಶದ ಜನತೆ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೇಂದ್ರ ಸರಕಾರದ ಸರ್ವಾಧಿಕಾರ ಧೋರಣೆಯಿಂದಾಗಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಸಂಸತ್ತಿನಲ್ಲಿ ನಡೆದ ದಾಂಧಲೆಗೆ ಭದ್ರತಾ ವೈಫಲ್ಯ ಕಾರಣ. ಆದರೆ ಗೃಹ ಸಚಿವರ ಸ್ಪಷ್ಟೀಕರಣ ಕೇಳಿದರೆ ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಕಿಡಿಕಾರಿದರು.

ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಸಂವಿಧಾನ ಕೂಡ ಉಳಿಯುವುದಿಲ್ಲ. ಕೇಂದ್ರದ ಸರ್ವಾಧಿಕಾರ ಧೋರಣೆ ವಿರುದ್ದ ದೇಶದ ಜನತೆ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

Key words: people - fight -against - dictatorial attitude - Centre-Minister-Dinesh Gundurao.

Tags :

.