HomeBreaking NewsLatest NewsPoliticsSportsCrimeCinema

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡಲು ನಿರ್ಧಾರ- ಗೃಹ ಸಚಿವ ಡಾ.ಜಿ.ಪರಮೇಶ್ವರ್

12:09 PM Aug 02, 2024 IST | prashanth

ಬೆಂಗಳೂರು,ಆಗಸ್ಟ್,2,2024 (www.justkannada.in): ಮುಡಾ ಹಗರಣ ವಿರೋಧಿಸಿ  ಬಿಜೆಪಿ- ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಸರ್ಕಾರ ಅನುಮತಿ ನೀಡಲು ನಿರ್ಧರಿಸಿದೆ.

ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದು, ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದಿದ್ದಾರೆ. ಹೀಗಾಗಿ ಅನುಮತಿ ನೀಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.

ಸಿಎಂಗೆ ರಾಜ್ಯಪಾಲರ ಶೋಕಾಸ್ ನೊಟೀಸ್ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಆತುರವಾಗಿ ನೋಟಿಸ್ ಕೊಟ್ಟಿದ್ದಾರೆ. ನಿನ್ನೆ ರಾತ್ರಿಯೇ ಸಂಪುಟದ ನಿರ್ಣಯ ಕಳುಹಿಸಲು ತೀರ್ಮಾನಿಸಲಾಗಿತ್ತು. ರಾಜ್ಯದಲ್ಲಿ ರಾಜ್ಯಪಾಲರು ಇಲ್ಲ‌. ಅವರ ಕಚೇರಿಗೆ ನಿನ್ನೆಯೇ ತಲುಪಿಸಿರಬೇಕು. ರಾಜ್ಯಪಾಲರ ಮೇಲೆ ಬೇರೆ ಒತ್ತಡ ಇರಬಹುದು. ಆ ರೀತಿಯ ಅನುಮಾನಗಳು ನಮಗೆ ಬಂದಿವೆ. ರಾಜ್ಯಪಾಲರು ಏನೇ ನಿರ್ಧಾರ ಕೈಗೊಳ್ಳಲಿ. ಎದುರಿಸೋಕೆ ನಾವು ಸಿದ್ಧರಿದ್ದೇವೆ. ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

Key words: permission, BJP-JDS, Padayatra, Minister, Parameshwar

Tags :
BJP-JDSministerpadayatraParameshwarpermission
Next Article