HomeBreaking NewsLatest NewsPoliticsSportsCrimeCinema

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿಕೆ ವಾಗ್ದಾಳಿ.

04:52 PM Jun 18, 2024 IST | prashanth

ಹುಬ್ಬಳ್ಳಿ,ಜೂನ್,18,2024 (www.justkannada.in): ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಜನರ ಹಣ ಕಿತ್ತುಕೊಂಡು ಅವರಿಗೆ ನೀಡೋದು ಯಾವ ಅರ್ಥ ಕಳೆದ 8 ತಿಂಗಳಿನಿಂದ ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ. ಈಗ ಕೇಂದ್ರದ ಕಡೆ ಬೊಟ್ಟು ಮಾಡುತ್ತಾರೆ ಕೇಂದ್ರ ಸರ್ಕಾರ ದರ ಏರಿಸಿಲ್ಲ ರಾಜ್ಯ ಸರ್ಕಾರ ಏರಿಸಿದೆ ಗ್ಯಾರಂಟಿಗೆ ಹಣ ಬೇಕೆಂದು ಎಂಬಿ ಪಾಟೀಲ್ ಹೇಳಿದ್ದಾರೆ. 'ಏಕಾಏಕಿ ರಾಜ್ಯ ಸರ್ಕಾರ ತೈಲ ಬೆಲೆ ಏರಿಕೆ ಮಾಡಿದ್ದು, ಸರ್ಕಾರದ ಪರಿಸ್ಥಿತಿ ಹೇಗಿದೆ ಎನ್ನುವುದು ಜನತೆ ಅರಿಯಬೇಕಿದೆ ಎಂದು ಕಿಡಿಕಾರಿದರು.

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಬಂಧನ ಕುರಿತು ಪ್ರತಿಕ್ರಿಯಿಸಿದ  ಹೆಚ್.ಡಿ ಕುಮಾರಸ್ವಾಮಿ, 'ಕೇಂದ್ರ ಸಚಿವನಾಗಿ ನಾನು ಈ ಕುರಿತು ಮಾತನಾಡುವುದು ಸರಿಯಲ್ಲ. ಆದರೆ, ಕಾನೂನಿನ ಅಡಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಅನುಭವಿಸಲೇಬೇಕು. ಕಾನೂನಿನ ಎದುರು ಎಲ್ಲರೂ ಸಮಾನರು ಎಂದರು.

Key words: Petrol-diesel-price-hike-Union Minister -HDK

Tags :
DieselHDKhike.petrolpriceUnion minister
Next Article