ಮತದಾರರಿಗೆ ಉಚಿತ ಗ್ಯಾರಂಟಿ ಅಮಿಷ ನಿರ್ಬಂಧ ಕೋರಿ ಹೈಕೋರ್ಟ್ ಗೆ ಪಿಐಎಲ್
04:24 PM Dec 06, 2023 IST
|
prashanth
ಬೆಂಗಳೂರು,ಡಿಸೆಂಬರ್,6,2023(www.justkannada.in): ಮತದಾರರಿಗೆ ಉಚಿತ ಗ್ಯಾರಂಟಿ ಅಮಿಷ ಒಡ್ಡುತ್ತಿರುವುದನ್ನು ನಿರ್ಬಂಧಿಸುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ.
ಬ್ರಿಗೇಡಿಯರ್ ರವಿ ಮುನಿಸ್ವಾಮಿ ಸೇರಿ ಮತ್ತಿತರರಿಂದ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳಿಂದ ಮತದಾರರಿಗೆ ಅಮಿಷ ಒಡ್ಡಲಾಗುತ್ತಿದೆ. ಆಮಿಷ ಒಡ್ಡುವ ಅಭ್ಯರ್ಥಿಗಳ, ಪಕ್ಷಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಜನರ ತೆರಿಗೆ ಹಣ ಅಧಿಕಾರದ ಲಾಲಾಸೆಗೆ ಬಳಸುತ್ತಿದ್ದಾರೆ. ದೇಶದ ಅಭಿವೃದ್ಧಿಗೆಗೆ ಇರುವ ಬೊಕ್ಕಸವನ್ನು ಅಮಿಷಕ್ಕೆ ಬಳಸಲಾಗುತ್ತಿದೆ. ಮತದಾರರಿಗೆ ಪ್ರಲೋಭನೆ ಒಡ್ಡಿ ಮತ ಕೇಳುವುದು ಸಂವಿಧಾನ ಬಾಹಿರ. ಹೀಗಾಗಿ ಸೂಕ್ತ ಮಾರ್ಗಸೂಚಿ ಹೊರಡಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡುವಂತೆ ಪಿಐಎಲ್ ನಲ್ಲಿ ಮನವಿ ಮಾಡಿದ್ದಾರೆ.
Key words: PIL - High Court - ban - free guarantee – voter
Next Article