ಕಲ್ಬುರ್ಗಿಗೆ ಪ್ರಧಾನಿ ಮೋದಿ ಆಗಮನ: ಸೊಲ್ಲಾಪುರಕ್ಕೆ ಪ್ರಯಾಣ.
10:24 AM Jan 19, 2024 IST | prashanth
ಕಲಬುರಗಿ,ಜನವರಿ,19,2024(www.justkannada.in ): ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಆಗಮಿಸಿದ್ದು,ಸರ್ಕಾರದ ಪರವಾಗಿ ಸಚಿವ ಶರಣಪ್ರಕಾಶ್ ಪಾಟೀಲ್ ಸ್ವಾಗತ ಮಾಡಿದರು.
ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸಚಿವ ಶರಣಪ್ರಕಾಶ್ ಪಾಟೀಲ್ ಸ್ವಾಗತಿಸಿದ್ದು ಈ ವೇಳೆ ಕೇಂದ್ರ ಸಚಿವ ಭಗವಂತಖೂಬ ಸಂಸದ ಉಮೇಶ್ ಜಾಧವ್ ಉಪಸ್ಥಿತರಿದ್ದರು.
ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಸೊಲ್ಲಾಪುರಕ್ಕೆ ತೆರಳಿದ್ದಾರೆ.
ಸೊಲ್ಲಾಪುರಕ್ಕೆ ಭೇಟಿ ಬಳಿಕ ಅಲ್ಲಿಂದ ಕಲಬುರಗಿಗೆ ಆಗಮಿಸಿ ಬಳಿಕ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಬರಲಿದ್ದಾರೆ. ಈ ಹಿನ್ನೆಲೆ ಇಂದು ಬೆಳಗ್ಗೆಯಿಂದಲೇ ಮೋದಿ ಸಂಚರಿಸುವ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
Key words: PM -Modi- arrival - Kalburgi