ಅಮೃತ್ ಭಾರತ್ ಮತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ.
ಅಯೋಧ್ಯೆ, ಡಿಸೆಂಬರ್ ,30,2023(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎರಡು ಅಮೃತ್ ಭಾರತ್ ರೈಲುಗಳು ಹಾಗೂ 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು.
ಅಯೊಧ್ಯೆಯ ಅಯೋಧ್ಯಾ ಧಾಮ್ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಎರಡು ಅಮೃತ್ ಭಾರತ್ ರೈಲುಗಳು ಮತ್ತು 6 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ ನೀಡಿದರು.
ದೇಶದ ಇತರೆಡೆಗಳ ವಂದೇ ಭಾರತ್ ರೈಲುಗಳಿಗೂ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಇದರಲ್ಲಿ ಕರ್ನಾಟಕದ ಮಂಗಳೂರಿನಿಂದ ಗೋವಾಕ್ಕೆ ತೆರಳುವ, ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುವ ವಂದೇ ಭಾರತ್ ರೈಲುಗಳು ಮತ್ತು ಮಾಲ್ಡಾ ಬೆಂಗಳೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ಕೂಡ ಸೇರಿವೆ.
ಅಯೋಧ್ಯೆ – ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್‌ಪ್ರೆಸ್, ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ – ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ಅಮೃತಸರ – ದೆಹಲಿ ವಂದೇ ಭಾರತ್ ಎಕ್ಸ್ ಪ್ರೆಸ್, ಕೊಯಮತ್ತೂರು-ಬೆಂಗಳೂರು ಕಂಟೋನ್ಮೆಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್, ಜಲ್ನಾ – ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್, ಮಂಗಳೂರು – ಮಡ್ಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ಗಳಿಗೆ ಚಾಲನೆ ದೊರೆಯಿತು.
Key words: PM Modi-inaugurated- Amrit Bharat -Vande Bharat trains.