ಬೆಂಗಳೂರಿನಲ್ಲಿ ‘BIETC’ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ.
03:25 PM Jan 19, 2024 IST
|
prashanth
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಭಟ್ಟರ ಮಾರೇನಹಳ್ಳಿಯಲ್ಲಿ ನಿರ್ಮಿಸಿರುವ ಬಿಐಇಟಿಸಿ ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಬೆಂಗಳೂರು,ಜನವರಿ,19,2024(www.justkannada.in): ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
1,600 ಕೋಟಿ ರೂ.ಗಳ ವೆಚ್ಚದಲ್ಲಿ 43 ಎಕರೆ ಕ್ಯಾಂಪಸ್ ಬೋಯಿಂಗ್ ಕಂಪನಿಯ ಅತಿದೊಡ್ಡ ಹೂಡಿಕೆಯಾಗಿದೆ. ವೈಮಾನಿಕ ಕ್ಷೇತ್ರಕ್ಕೆ ಸಂಬಂಧಿಸಿದ ಬೋಯಿಂಗ್ ಕೇಂದ್ರ ಮತ್ತು ಇದರ ಜೊತೆಗೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಕ್ಯಾಂಪಸ್ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಕಂಪನಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಪಕ್ಷ ನಾಯಕ ಆರ್.ಆಶೋಕ್, ಉಪಸ್ಥಿತರಿದ್ದರು.
Key words: PM Modi –inaugurated- BIETC -campus - Bangalore
Next Article