HomeBreaking NewsLatest NewsPoliticsSportsCrimeCinema

ಬಿಜೆಪಿ ಅಭ್ಯರ್ಥಿ ಯದುವೀರ್​ ಗೆ ಪತ್ರ ಬರೆದ ಪ್ರಧಾನಿ ಮೋದಿ.

10:32 AM Apr 22, 2024 IST | prashanth

ಮೈಸೂರು,ಫೆಬ್ರವರಿ,22,2024 (www.justkannada.in): ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮತದಾನಕ್ಕೆ ನಾಲ್ಕು ದಿನ ಬಾಕಿ ಇದ್ದು, ಪ್ರಚಾರದ ಭರಾಟೆ ಜೋರಾಗಿದೆ. ಈ ಮಧ್ಯೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದಿದ್ದಾರೆ.

ಹೌದು, ಯದುವೀರ್ ಅವರಿಗೆ ಪತ್ರ ಬರೆದು ಪ್ರಧಾನಿ ಮೋದಿ ವಿಶ್ವಾಸ ಹಿಮ್ಮಡಿಗೊಳಿಸಿದ್ದಾರೆ.  ನನ್ನ ಸಹೋದ್ಯೋಗಿ ಯದುವೀರ್ ಜೀ ಎಂದು ಪತ್ರ ಆರಂಭಸಿರುವ ಮೋದಿ ನೀವು ಗೆದ್ದು ಪಾರ್ಲಿಮೆಂಟ್ ಗೆ ಬಂದೇ ಬರುತ್ತೀರಿ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನೇರವಾಗಿ ಜನರ ಸೇವೆ ಮಾಡುವ ಮೂಲಕ ಮೈಸೂರಿನ ಒಡೆಯರ ಶ್ರೀಮಂತ ಪರಂಪರೆಯನ್ನು ಮುನ್ನಡೆಸುತ್ತಿರುವುದು ಶ್ಲಾಘನೀಯ. ಸುಸ್ಥಿರ ಅಭಿವೃದ್ಧಿ ಮತ್ತು ಶಿಕ್ಷಣಕ್ಕಾಗಿ ನಿಮ್ಮ ಸಮರ್ಪಣೆಯು ಸ್ಪಷ್ಟವಾಗಿದೆ. ಜನರ ಆಶೀರ್ವಾದದಿಂದ ನೀವು ಸಂಸತ್ತಿಗೆ ಬರುತ್ತೀರಿ ಎಂಬ ವಿಶ್ವಾಸ ನನಗಿದೆ. ಈ ಪತ್ರ ನಿಮಗೆ ಉತ್ತಮ ಆರೋಗ್ಯವನ್ನು ನೀಡುತ್ತೆ ಎಂದು ಭಾವಿಸುವೆ. ನಿಮ್ಮಂತಹ ತಂಡದ ಸದಸ್ಯರು ನನಗೆ ದೊಡ್ಡ ಆಸ್ತಿ ಎಂದು ಪ್ರಧಾನಿ ಮೋದಿ ಪತ್ರದಲ್ಲಿ ತಿಳಿಸಿದ್ದಾರೆ.

Key words: PM Modi, letter,  Yaduveer

Tags :
PM Modi-letter - BJP candidate -Yaduveer.
Next Article