ಪ್ರಧಾನಿ ಮೋದಿ ಭೇಟಿಯಾದ ಹೆಚ್.ಡಿ ದೇವೇಗೌಡರು: ಹೆಚ್.ಡಿಕೆ ,ಹೆಚ್.ಡಿ ರೇವಣ್ಣ ಸಾಥ್.
ನವದೆಹಲಿ,ಡಿಸೆಂಬರ್,21,2023(www.justkannada.in): ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಈ ನಡುವೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಭೇಟಿಯಾಗಿ ಚರ್ಚಿಸಿದರು.
ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ನವದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು ಕೆಲಹೊತ್ತು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಸೇರಿ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು ಎನ್ನಲಾಗಿದೆ.
ಇನ್ನು ಜೆಡಿಎಸ್ ನಾಯಕರನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತಸದ ವಿಚಾರ ಎಂದು ಹೇಳಿಕೊಂಡಿದ್ದಾರೆ.
'ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತಸದ ವಿಚಾರ. ಜತೆಗೆ, ಹೆಚ್ಡಿ ಕುಮಾರಸ್ವಾಮಿ, ಹೆಚ್ಡಿ ರೇವಣ್ಣ ಅವರೂ ಇದ್ದರು. ದೇಶದ ಪ್ರಗತಿಗೆ ದೇವೇಗೌಡರ ಅನುಸರಣೀಯ ಕೊಡುಗೆಯನ್ನು ಭಾರತವು ಬಹುವಾಗಿ ಗೌರವಿಸುತ್ತದೆ ಎಂದಿದ್ದಾರೆ.
Key words: PM Modi -met -HD Deve Gowda- HDK- HD Revanna