For the best experience, open
https://m.justkannada.in
on your mobile browser.

ಮೋದಿಯನ್ನ ಕೆಳಗಿಳಿಸಿ ರಾಹುಲ್ ಗಾಂಧಿ ಪ್ರಧಾನಿ ಮಾಡಬೇಕು-ಸಿಎಂ ಸಿದ್ದರಾಮಯ್ಯ

03:50 PM Apr 06, 2024 IST | prashanth
ಮೋದಿಯನ್ನ ಕೆಳಗಿಳಿಸಿ ರಾಹುಲ್ ಗಾಂಧಿ ಪ್ರಧಾನಿ ಮಾಡಬೇಕು ಸಿಎಂ ಸಿದ್ದರಾಮಯ್ಯ

ಕೋಲಾರ,ಏಪ್ರಿಲ್,6,2024 (www.justkannada.in):  ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ ರಾಹುಲ್ ಗಾಂಧಿ ಅವರನ್ನು ಪ್ರಧಾನ ಮಂತ್ರಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ  ಪ್ರಚಾರ ನಡೆಸಿ  ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕೊಟ್ಟ ಮಾತಿನಂತೆ ಎಲ್ಲಾ ಭರವಸೆ ಈಡೇರಿಸಿದೆ. ಹೀಗಾಗಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಕೆಳಗಿಳಿಸಬೇಕು. ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಬೇಕು.  ಮೋದಿ ಕೆಳಗಿಳಿಸಿ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದರು.

ನಾವು ಮತ್ತೆ 25 ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಾವು ತಂದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿಯವರು ಹೇಳಿದರು. ಮುಂದಿನ ವರ್ಷಗಳವರೆಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ತಿಳಿಸಿದರು. ಬಿಜೆಪಿ ಹೇಳಿದ್ದು ಎಲ್ಲಾ ಸುಳ್ಳು ಗ್ಯಾರಂಟಿಗಳು ಐದು ವರ್ಷ ಮುಂದುವರೆಯುತ್ತವೆ ಎಂದರು.

Key words: PM- Modi-Rahul Gandhi-CM-Siddaramaiah

Tags :

.