HomeBreaking NewsLatest NewsPoliticsSportsCrimeCinema

ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ: ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ.  

11:04 AM Apr 20, 2024 IST | prashanth

ಬೆಂಗಳೂರು,ಏಪ್ರಿಲ್,20,2024 (www.justkannada.in): ಲೋಕಸಭೆ ಚುನಾವಣೆ ಹಿನ್ನೆಲೆ  ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದು, ಇಂದು ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು, ಚಿಕ್ಕಬಳ್ಳಾ ಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಮೈತ್ರಿ ಅಭ್ಯರ್ಥಿಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆ ವೇಳೆಗೆ  ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ,  ಇಲ್ಲಿಂದ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ತೆರಳಿ 3 ಗಂಟೆ ಸುಮಾರಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ನಂತರ ಸಂಜೆ ಮತ್ತೆ ಬೆಂಗಳೂರಿಗೆ ವಾಪಸ್‌ ಆಗಲಿರುವ ಪ್ರಧಾನಿ ಮೋದಿ ಅವರು 5 ಗಂಟೆಗೆ ಅರಮನೆ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಬೆಂಗಳೂರು ಕೇಂದ್ರ, ದಕ್ಷಿಣ, ಉತ್ತರ ಹಾಗೂ ಗ್ರಾಮಾಂತರ ಲೋಕಸಭೆ ಕ್ಷೇತ್ರಗಳಲ್ಲಿನ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ.

ಏಪ್ರಿಲ್ 14 ರಂದು ಪ್ರಧಾನಿ ಮೋದಿ ಮೈಸೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದರು. ಬಳಿಕ ಮಂಗಳೂರಿನಲ್ಲಿ ರೋಡ್ ಶೋ ನಡೆಸಿದ್ದರು.

Key words: PM Modi, state, campaigning

Tags :
PM Modi - state –today- campaigning - alliance candidates.
Next Article