For the best experience, open
https://m.justkannada.in
on your mobile browser.

ಏ.14 ರಂದು ಪ್ರಧಾನಿ ಮೋದಿ ರಾಜ್ಯ ಪ್ರವಾಸ, ರೋಡ್ ಶೋ.

11:08 AM Apr 08, 2024 IST | prashanth
ಏ 14 ರಂದು ಪ್ರಧಾನಿ ಮೋದಿ ರಾಜ್ಯ ಪ್ರವಾಸ  ರೋಡ್ ಶೋ

ಬೆಂಗಳೂರು,ಏಪ್ರಿಲ್,8,2024 (www.justkannada.in): ಲೋಕಸಭಾ ಚುನಾವಣಾ ಕಣ ರಂಗೇರಿದ್ದು ಪ್ರಚಾರದ ಭರಾಟೆ ಜೋರಾಗಿದೆ.  ಎಲ್ಲಾ ರಾಜಕೀಯ ಪಕ್ಷಗಳ  ನಾಯಕರು ಪ್ರಚಾರದ ಅಖಾಡಕ್ಕೆ ಇಳಿದಿದ್ದು ತಮ್ಮ ತಮ್ಮ ಅಭ್ಯರ್ಥಿಗಳ ಪರ ಮತಯಾಚನೆಗೆ ಮುಂದಾಗಿದ್ದಾರೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14 ರಂದು ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಂಬೇಡ್ಕರ್‌ ಜನ್ಮದಿನವಾಗಿರುವ ಎ. 14ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಂದು ಬೆಂಗಳೂರು ಉತ್ತರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಂತರ ಅದೇ ದಿನ ಮಂಗಳೂರಿನಲ್ಲೂ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರದಲ್ಲಿಯೂ ಪ್ರಧಾನಿ ಪ್ರಚಾರ ಕಾರ್ಯ ಕೈಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26 ರಂದು ನಡೆಯಲಿದೆ.

Key words: PM, Modi, state tour, April 14

Tags :

.