For the best experience, open
https://m.justkannada.in
on your mobile browser.

ಕನ್ನಡ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ.

11:04 AM Jan 16, 2024 IST | prashanth
ಕನ್ನಡ ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಬೆಂಗಳೂರು, ಜನವರಿ,16,2024(www.justkannada.in):  ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್  ಅವರು ಯೂಟ್ಯೂಬ್ ​ನಲ್ಲಿ ಹಾಡಿರುವ, 'ಪೂಜಿಸಲೆಂದೇ ಹೂಗಳ ತಂದೆ' ಹಾಡಿನ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಈ ಹಾಡಿನ ಲಿಂಕ್​ ಅನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರಮೋದಿ, ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದೆ ಕೊಂಡೊಯ್ಯುತ್ತವೆ ಎಂದು  ಹೇಳಿದ್ದಾರೆ.

ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಪ್ರಧಾನಿ ಮೋದಿ ನುಡಿದ್ದಾರೆ.

ಪೂಜಿಸಲೆಂದೆ ಹೂಗಳ ತಂದೆ' ಹಾಡು ಮೂಲತಃ ದೊರೈ-ಭಗವಾನ್ ಜೋಡಿಯಿಂದ ನಿರ್ದೇಶಿಸಲ್ಪಟ್ಟ ರಾಜ್‌ಕುಮಾರ್ ನಟನೆಯ 'ಎರಡು ಕನಸು' ಸಿನಿಮಾದ ಹಾಡು. ಈ ಸಿನಿಮಾ 1974 ರಲ್ಲಿ ಈ ಸಿನಿಮಾ ತೆರೆ ಕಂಡಿತ್ತು. ಇದೀಗ ಅದೇ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಭಾವನಾತ್ಮಕವಾಗಿ ಹಾಡಿ ಯೂಟ್ಯೂಬ್​ ನಲ್ಲಿ ಪ್ರಕಟಿಸಿದ್ದರು.

Key words:  PM –Modi- tweeted - appreciation - Kannada song.

Tags :

.