For the best experience, open
https://m.justkannada.in
on your mobile browser.

ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಗೆಲುವು.

05:45 PM Jun 04, 2024 IST | prashanth
ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ಮೋದಿಗೆ ಭರ್ಜರಿ ಗೆಲುವು

ನವದೆಹಲಿ,ಜೂನ್,4,2024 (www.justkannada.in):  ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು,  ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಭರ್ಜರಿ ಜಯ ಸಾಧಿಸಿದ್ದಾರೆ .

ವಾರಣಾಸಿ ಕ್ಷೇತ್ರದಲ್ಲಿ 1,52, 513 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ದ ಗೆಲುವು ಸಾಧಿಸುವ ಮೂಲಕ  3 ನೇ ಬಾರಿ ಆಯ್ಕೆಯಾಗಿದ್ದಾರೆ. 2014 ಹಾಗೂ 2019ರಲ್ಲಿ ಇದೇ ವಾರಾಣಸಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ ಈ ಬಾರಿಯೂ ಗೆಲುವಿನ ನಗೆ ಬೀರುವ ಮೂಲಕ ಹ್ಯಾಟ್ರಿಕ್​ ಗೆಲುವು ದಾಖಲಿಸಿದ್ದಾರೆ.

ಪ್ರಾರಂಭದ ಕೆಲವು ಸುತ್ತುಗಳಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಅಜಯ್​ ರೈ ಅವರು ಮುನ್ನಡೆ ಸಾಧಿಸಿದ್ದರು. 2014 ಹಾಗೂ 2019ರಲ್ಲಿಯೂ ಕಾಂಗ್ರೆಸ್​ ಅಜಯ್​ ರೈ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಎರಡೂ ಸಲವೂ ಅಜಯ್​ ಅವರು ಮೋದಿ ವಿರುದ್ಧ ಸೋಲನಭವಿಸಿದ್ದರು. ಆದರೂ ಈ ಬಾರಿ ಮತ್ತೆ ಮೋದಿ ವಿರುದ್ಧವೇ ಕಣಕ್ಕಿಳಿದಿದ್ದರು. ಇದೀಗ ಮೂರನೇ ಬಾರಿಯೂ ಸೋಲನಭವಿಸಿದ್ದಾರೆ.

Key words: PM Modi, victory, Varanasi, constituency

Tags :

.