HomeBreaking NewsLatest NewsPoliticsSportsCrimeCinema

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಹುಟ್ಟಹಬ್ಬದ ಶುಭಕೋರಿದ ಪ್ರಧಾನಿ ಮೋದಿ.

11:05 AM May 18, 2024 IST | prashanth

ನವದೆಹಲಿ,ಮೇ,18,2024 (www.justkannada.in):  ಇಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ 91ನೇ ಹುಟ್ಟುಹಬ್ಬವಾಗಿದ್ದು,  ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು  ಟ್ವೀಟ್ ಮೂಲಕ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, 'ಎಚ್‌.ಡಿ.ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಷ್ಟ್ರಕ್ಕೆ ನೀಡಿದ ಕೊಡುಗೆಗಾಗಿ ರಾಜಕೀಯ ವಲಯದಲ್ಲಿ ಅವರು ಸಾಕಷ್ಟು ಗೌರವಕ್ಕೆ ಪಾತ್ರರಾಗಿದ್ದಾರೆ. ರಾಜಕೀಯ ವಲಯದಲ್ಲೇ ಅತ್ಯಂತ ಗೌರವಯುತ ವ್ಯಕ್ತಿ. ಕೃಷಿ ಗ್ರಾಮೀಣ ವಲಯಕ್ಕೆ ಅವರ ಕೊಡುಗೆ ಅಪಾರ.

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಒಲವು ಗಮನಾರ್ಹವಾಗಿದೆ. ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ' ಎಂದು  ಪ್ರಧಾನಿ ಮೋದಿ ಶುಭಾಶಯ ತಿಳಿಸಿದ್ದಾರೆ.

Key words: PM Modi -wished former PM -HD Deve Gowda - birthday.

Tags :
birthdayformer pmHD Deve GowdaPM Modiwished
Next Article