HomeBreaking NewsLatest NewsPoliticsSportsCrimeCinema

ಅಯೋಧ್ಯೆ ಶ್ರೀಮಂತ ಪರಂಪರೆ ಸಂರಕ್ಷಿಸಲು ಬದ್ಧ- ಪ್ರಧಾನಿ ನರೆಂದ್ರ ಮೋದಿ

10:28 AM Dec 30, 2023 IST | prashanth

ನವದೆಹಲಿ, ಡಿಸೆಂಬರ್ 30,2023(www.justkannada.in): ಅಯೋಧ್ಯೆಯ ಶ್ರೀಮಂತ ಪರಂಪರೆ ಸಂರಕ್ಷಿಸಲು ಬದ್ಧರಾಗಿದ್ದೇವೆ ಎಂದು ಪ್ರಧಾನಿ ನರೆಂದ್ರ ಮೋದಿ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಒಟ್ಟು 15,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹೂಡಿಕೆಯ ಹಲವು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ  ಪ್ರಧಾನಿ ನರೇಂದ್ರ ಮೋದಿ  ಇಂದು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸರ್ಕಾರವು ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು, ಸಂಪರ್ಕವನ್ನು ಸುಧಾರಿಸಲು ಮತ್ತು ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಯ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು ಬದ್ಧವಾಗಿದ್ದೇವೆ. ಈ ದಿಸೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಹಾಗೂ ಮರು ಅಭಿವೃದ್ಧಿ ಪಡಿಸಿದ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದೇನೆ. ಇದರೊಂದಿಗೆ ಇನ್ನೂ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುವ ಭಾಗ್ಯ ನನ್ನದಾಗಿದೆ. ಇದು ಅಯೋಧ್ಯೆ ಮತ್ತು ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿರುವ ನನ್ನ ಕುಟುಂಬ ಸದಸ್ಯರ ಜೀವನವನ್ನು ಸುಲಭಗೊಳಿಸಲಿದೆ’ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Key words: PM-Narendra Modi - preserve –Ayodhya- rich heritage

Tags :
PM-Narendra Modi - preserve –Ayodhya- rich heritage
Next Article