For the best experience, open
https://m.justkannada.in
on your mobile browser.

ಮಾಜಿ ಸಿಎಂ ಬಿಎಸ್ ವೈ ವಿರುದ್ದ ಪೋಕ್ಸೋ ಕೇಸ್: ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದ ಪೊಲೀಸರು

05:44 PM Jun 27, 2024 IST | prashanth
ಮಾಜಿ ಸಿಎಂ ಬಿಎಸ್ ವೈ ವಿರುದ್ದ ಪೋಕ್ಸೋ ಕೇಸ್  ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದ ಪೊಲೀಸರು

ಬೆಂಗಳೂರು, ಜೂನ್ 27,2024 (www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಆರೋಪ ಪಟ್ಟಿಯನ್ನ ಸಲ್ಲಿಕೆ ಮಾಡಿದ್ದಾರೆ.

ಪೊಲೀಸರು  ಬೆಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ. ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು.

ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಆದರೆ, ಹಲವು ಬಾರಿ ನೋಟಿಸ್‌ ನೀಡಿದರೂ ಬಿಎಸ್ ವೈ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿ ಹಾಜರಾಗುತ್ತಿಲ್ಲವೆಂದು ಸಿಐಡಿ ಕೋರ್ಟ್‌ ಮೊರೆ ಹೋಗಿತ್ತು. ಬಿಎಸ್ ವೈ ವಿರುದ್ದ ಬಂಧನಕ್ಕೆ ವಾರೆಂಟ್‌ ಜಾರಿ ಮಾಡಿ ಬೆಂಗಳೂರು ವಿಶೇಷ ನ್ಯಾಯಾಲಯವು ಆದೇಶಿಸಿತ್ತು.

ಪ್ರಕರಣ ರದ್ದು ಕೋರಿ ಮತ್ತು ಬಂಧನ ಮಾಡದಂತೆ ಬಿಎಸ್‌ ಯಡಿಯೂರಪ್ಪ ಹೈಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಬಿಎಸ್ ಯಡಿಯೂರಪ್ಪರನ್ನ ಬಂಧನ ಮಾಡದಂತೆ  ಸೂಚಿಸಿತ್ತು. ಅಲ್ಲದೆ  ಜೂನ್‌ 17ರಂದು  ತಪ್ಪದೆ ತನಿಖೆಗೆ ಹಾಜರಾಗುವಂತೆ ಬಿಎಸ್ ವೈಗೆ ಸೂಚನೆ ನೀಡಿತ್ತು. ಅದರಂತೆ ಬಿಎಸ್​ವೈ ಜೂನ್ 17ರಂದು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.

Key words: POCSO case, against, BSY, charge sheet, court

Tags :

.