ಮಾಜಿ ಸಿಎಂ ಬಿಎಸ್ ವೈ ವಿರುದ್ದ ಪೋಕ್ಸೋ ಕೇಸ್: ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದ ಪೊಲೀಸರು
ಬೆಂಗಳೂರು, ಜೂನ್ 27,2024 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಆರೋಪ ಪಟ್ಟಿಯನ್ನ ಸಲ್ಲಿಕೆ ಮಾಡಿದ್ದಾರೆ.
ಪೊಲೀಸರು ಬೆಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ತನ್ನ ಮಗಳ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಬಾಲಕಿ ತಾಯಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಆದರೆ, ಹಲವು ಬಾರಿ ನೋಟಿಸ್ ನೀಡಿದರೂ ಬಿಎಸ್ ವೈ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿ ಹಾಜರಾಗುತ್ತಿಲ್ಲವೆಂದು ಸಿಐಡಿ ಕೋರ್ಟ್ ಮೊರೆ ಹೋಗಿತ್ತು. ಬಿಎಸ್ ವೈ ವಿರುದ್ದ ಬಂಧನಕ್ಕೆ ವಾರೆಂಟ್ ಜಾರಿ ಮಾಡಿ ಬೆಂಗಳೂರು ವಿಶೇಷ ನ್ಯಾಯಾಲಯವು ಆದೇಶಿಸಿತ್ತು.
ಪ್ರಕರಣ ರದ್ದು ಕೋರಿ ಮತ್ತು ಬಂಧನ ಮಾಡದಂತೆ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಬಿಎಸ್ ಯಡಿಯೂರಪ್ಪರನ್ನ ಬಂಧನ ಮಾಡದಂತೆ ಸೂಚಿಸಿತ್ತು. ಅಲ್ಲದೆ ಜೂನ್ 17ರಂದು ತಪ್ಪದೆ ತನಿಖೆಗೆ ಹಾಜರಾಗುವಂತೆ ಬಿಎಸ್ ವೈಗೆ ಸೂಚನೆ ನೀಡಿತ್ತು. ಅದರಂತೆ ಬಿಎಸ್ವೈ ಜೂನ್ 17ರಂದು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
Key words: POCSO case, against, BSY, charge sheet, court