For the best experience, open
https://m.justkannada.in
on your mobile browser.

ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಕೇಸ್: ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ.

04:53 PM Jun 01, 2024 IST | prashanth
ಪ್ರಜ್ವಲ್ ಪೆನ್ ಡ್ರೈವ್ ಹಂಚಿಕೆ ಕೇಸ್  ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ,ಜೂನ್,1,2024 (www.justkannada.in): ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ , ಚೇತನ್  ಇಬ್ಬರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 2ನೇ ಹೆಚ್ಚುವರಿ ಸಿವಿಲ್ ಜೆಎಂಎಫ್ ಸಿ ಕೋರ್ಟ್  ಆದೇಶ ಹೊರಡಿಸಿದೆ.

ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆ ನವೀನ್ ಗೌಡ , ಚೇತನ್ಇಬ್ಬರನ್ನು ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು, ವಿಚಾರಣೆ ನಡೆಸಿದ ಕೋರ್ಟ್ ನವೀನ್ ಗೌಡ , ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.

ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಏಪ್ರಿಲ್ 23 ರಂದು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿತ್ತು. ಈ ನಡುವೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರನ್ನು ಎಸ್ ಐಟಿ  ವಶದಲ್ಲಿದ್ದಾರೆ.

Key words: Prajwal, pen drive,  case, 14 days,judicial custody

Tags :

.