For the best experience, open
https://m.justkannada.in
on your mobile browser.

ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದ ಕೂಡಲೇ ಅರೆಸ್ಟ್- ಗೃಹ ಸಚಿವ ಡಾ.ಜಿ.ಪರಮೇಶ್ವರ್.

05:16 PM May 30, 2024 IST | prashanth
ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದ ಕೂಡಲೇ ಅರೆಸ್ಟ್  ಗೃಹ ಸಚಿವ ಡಾ ಜಿ ಪರಮೇಶ್ವರ್

ಶಿವಮೊಗ್ಗ,ಮೇ,30,2024 (www.justkannada.in): ಸಂಸದ ಪ್ರಜ್ವಲ್ ರೇವಣ್ಣ ಮ್ಯೂನಿಕ್ ನಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸುತ್ತಿರುವ ಮಾಹಿತಿ ಲಭ್ಯವಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದ ಕೂಡಲೇ ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರಜ್ವಲ್ ಬೆಂಗಳೂರುಗೆ ಬರುತ್ತಿರುವ ಬಗ್ಗೆ ಮಾಹಿತಿ ಇದೆ. ಆದರೆ ಬಂದ ಮೇಲೆ ಖಚಿತವಾಗುತ್ತದೆ. ಬೆಂಗಳೂರಿಗೆ ಬಂದ ತಕ್ಷಣ ಪ್ರಜ್ವಲ್ ರೇವಣ್ಣರನ್ನ ಬಂಧಿಸಲಾಗುತ್ತದೆ. ಪ್ರಜ್ವಲ್ ಬಂಧನಕ್ಕೆ ಈಗಾಗಲೇ ವಾರೆಂಟ್ ಸಿದ್ದಪಡಿಸಲಾಗಿದೆ. ವಿಶೇಷ ತನಿಖಾ ತಂಡದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

Key words: Prajwal Revanna, arrested, Bangalore, Parameshwar

Tags :

.