For the best experience, open
https://m.justkannada.in
on your mobile browser.

ಯಾರನ್ನೂ ರಕ್ಷಣೆ ಮಾಡುವಂತಹದಿಲ್ಲ: ಕಾನೂನು ಚೌಕಟ್ಟಿನಲ್ಲಿ ಕ್ರಮ –ಸಚಿವ ಡಾ.ಜಿ.ಪರಮೇಶ್ವರ್.

11:42 AM May 01, 2024 IST | prashanth
ಯಾರನ್ನೂ ರಕ್ಷಣೆ ಮಾಡುವಂತಹದಿಲ್ಲ  ಕಾನೂನು ಚೌಕಟ್ಟಿನಲ್ಲಿ ಕ್ರಮ –ಸಚಿವ ಡಾ ಜಿ ಪರಮೇಶ್ವರ್

ಬೆಂಗಳೂರು,ಮೇ,1,2024 (www.justkannada.in): ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಕುರಿತು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಡಾ.ಜಿ.ಪರಮೇಶ್ವರ್, ರಾಜ್ಯ ಸರ್ಕಾರ ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವಂತಹದ್ದು ಏನೂ ಇಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಇದರಲ್ಲಿ ಬಹಳ ಜನರ ಜೀವನದ ಪ್ರಶ್ನೆ ಇದೆ. ಇಷ್ಟ ಬಂದ ಹಾಗೆ ತನಿಖೆ‌ ಮಾಡಲು ಆಗುವುದಿಲ್ಲ. ಹಾಗಾಗಿಯೇ ಎಸ್​ಐಟಿ ರಚನೆ ಮಾಡಿದ್ದೇವೆ ಎಂದು ತಿಳಿಸಿದರು.

ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ. ಅದಕ್ಕೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ. ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ . ಅಪರಾಧ ದಂಡಸಂಹಿತೆಯ (CRPC) ಸೆಕ್ಷನ್ 41a ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅದರಂತೆ, ಆರೋಪಿಗಳು 24 ಗಂಟೆಯ ಒಳಗೆ ಬಂದು ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ಎಸ್​ಐಟಿ ತಂಡ ಮುಂದಿನ ಪ್ರಕ್ರಿಯೆ ಮಾಡಲಿದೆ. ನಾವು ಎಸ್​ಐಟಿ ರಚನೆ ಮಾಡಿ ತನಿಖೆಗೆ ವಹಿಸಿದ್ದೇವೆ ಎಂದು  ಡಾ.ಜಿ.ಪರಮೇಶ್ವರ್ ತಿಳಿಸಿದರು.

Key words: Prajwal Revanna, case, Dr.G.Parameshwar

Tags :

.