ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ: ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ- ಆರ್.ಅಶೋಕ್.
ಬೆಂಗಳೂರು,ಏಪ್ರಿಲ್,29,2024 (www.justkannada.in): ಹಾಸನ ಸಂಸದ ಹಾಗೂ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ದ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.
ಈ ಕುರಿತು ಮಾತನಾಡಿರುವ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರೂ ಸಮಾನರು. ಪ್ರಕರಣ ಸಂಬಂಧ ಸರ್ಕಾರ ಎಸ್‌ಐಟಿ ರಚಿಸಿದೆ. ತನಿಖೆ ನಡೆಸಿ ಸತ್ಯಾಂಶ ಹೊರಬಂದರೇ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದರು.
ಪೆನ್ ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ರಕ್ಷಣೆ ಇಲ್ಲ ಎಂಬ ಡಿ.ಕೆ. ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್ ಅಶೋಕ್, ಈಗ ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆಯಲ್ಲ, ರಕ್ಷಣೆ ಕೊಡಲಿ ಎಂದು ತಿಳಿಸಿದರು.
ಕಾನೂನಿಗಿಂತ ಯಾರೂ ಕೂಡ ದೊಡ್ಡವರಿಲ್ಲ. ಪ್ರಜ್ವಲ್ ರೇವಣ್ಣ ಇರಲಿ, ಇನ್ಯಾರೇ ಇರಲಿ ತಪ್ಪು ಮಾಡಿದಾಗ ಕಾನೂನಿಗೆ ತಲೆ ಬಾಗಲೇಬೇಕು. ಈಗಾಗಲೇ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಹೇಳಿದ್ದಾರೆ. ಯಾರನ್ನು ರಕ್ಷಣೆ ಮಾಡುವ ಉದ್ದೇಶವಿಲ್ಲ ಎಂದು ಆರ್.ಅಶೋಕ್ ತಿಳಿಸಿದರು.
Key words: Prajwal Revanna, legal, action, R. Ashok