For the best experience, open
https://m.justkannada.in
on your mobile browser.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಎಸ್ ಐಟಿಯಿಂದ ಇಬ್ಬರ ಬಂಧನ.

03:59 PM May 28, 2024 IST | prashanth
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್  ಎಸ್ ಐಟಿಯಿಂದ ಇಬ್ಬರ ಬಂಧನ

ಬೆಂಗಳೂರು,ಮೇ,28,2024 (www.justkannada.in): ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿಕೆ ಮಾಡಿದ ಆರೋಪದ ಮೇಲೆ ಇಬ್ಬರನ್ನ ಎಸ್ ಐಟಿ ಪೊಲೀಸರು ಬಂಧಿಸಿದ್ದಾರೆ.

ನವೀನ್ ಗೌಡ , ಚೇತನ್ ಗೌಡ  ಬಂಧಿತರು. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯಿದ್ದ ಕಾರಣ  ಹೈಕೋರ್ಟ್ ಗೆ ಬಂದಿದ್ದ ವೇಳೆ ಈ ಇಬ್ಬರನ್ನು ಎಸ್ ಐ ಟಿ  ಬಂಧಿಸಿದೆ.

ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಏ.23 ರಂದು ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ವಿಡಿಯೋ ವೈರಲ್​ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್​ಡಿ ಕುಮಾರಸ್ವಾಮಿ ಅವರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೂರು ದಾಖಲಾದ ಬರೋಬ್ಬರಿ ಒಂದು ತಿಂಗಳು ಬಳಿಕ ಆರೋಪಿಗಳ ಬಂಧನವಾಗಿದೆ.

Key words: Prajwal Revanna, pen drive, case,  arrests, two

Tags :

.