ಲೈಂಗಿಕ ದೌರ್ಜನ್ಯ ಕೇಸ್: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು.
12:42 PM Apr 30, 2024 IST
|
prashanth
ಬೆಂಗಳೂರು,ಏಪ್ರಿಲ್,30,2024 (www.justkannada.in): ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನ ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಇಂದು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು ಈ ಬಗ್ಗೆ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಘೋಷಣೆ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಪಕ್ಷಕ್ಕೆ ಮುಜುಗರ ಹಿನ್ನೆಲೆ. ಮುಜುಗರ ತಪ್ಪಿಸಿಕೊಳ್ಳಲು ಅಮಾನತು ಮಾಡಲಾಗಿದೆ.
ಬಳಿಕ ಮತನಾಡಿದ ಜಿ.ಟಿ ದೇವೇಗೌಡರು, ಪ್ರಜ್ವಲ್ ವಿರುದ್ದದ ತನಿಖೆಗೆ ಎಲ್ಲಾ ರೀತಿಯ ಸಹಕಾರವಿದೆ. ತನಿಖೆ ವೇಳೆ ಯಾವುದೇ ಹೇಳಿಕೆ ನೀಡುವುದಿಲ್ಲ. ತನಿಖೆಯಲ್ಲಿ ಮಧ್ಯ ಪ್ರವೇಶಿಸಲ್ಲ. ಎಸ್ ಐಟಿ ತನಿಖೆಯಲ್ಲಿ ಆರೋಪ ಸಾಬೀತಾದರೇ ಶಾಶ್ವತವಾಗಿ ಪಕ್ಷದಿಂದ ಉಚ್ಛಾಟನೆ ಮಾಡುತ್ತೇವೆ ಎಂದು ತಿಳಿಸಿದರು.
Key words: Prajwal Revanna, suspended, JDS
Next Article