HomeBreaking NewsLatest NewsPoliticsSportsCrimeCinema

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 4ನೇ ಆರೋಪಿ ಬಂಧನ

01:53 PM May 10, 2024 IST | prashanth

ಮಂಗಳೂರು, ಮೇ 10,2024 (www.justkannada.in):   ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಎನ್ ಐಎ ಅಧಿಕಾರಿಗಳು ನಾಲ್ಕನೇ ಆರೋಪಿಯನ್ನು ಬಂಧಿಸಿದ್ದಾರೆ.

ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ಬಂಧಿತ ಆರೋಪಿ. ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್​ ಆನೆಮಹಲ್ ಬಳಿ ಎನ್ ಐಎ ಅಧಿಕಾರಿಗಳು ಮುಸ್ತಾಫ ಪೈಚಾರ್ ನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದಾರೆ.

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬುವವರನ್ನ, ಕೋಳಿ ಅಂಗಡಿ ಬಳಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್​ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದರು.

Key words: Praveen Nettaru, murder, case, arrested

Tags :
CM Siddaramaiah-congratulated- SSLC-Student-AnkitaPraveen Nettaru- murder –case- 4th accused -arrested
Next Article