HomeBreaking NewsLatest NewsPoliticsSportsCrimeCinema

ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ: ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ-ಸಚಿವ ಎಂ.ಬಿ ಪಾಟೀಲ್

03:47 PM Jul 17, 2024 IST | prashanth

ಬೆಂಗಳೂರು,ಜುಲೈ,17,2024 (www.justkannada.in):  ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ ಪಾಟೀಲ್ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜತೆ ಇಂದು ಮಾತನಾಡಿದ ಸಚಿವ ಎಂ.ಬಿ ಪಾಟೀಲ್ ಅವರು, ಈ ಸಂಬಂಧ ಸರಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಕೌಶಲಗಳಿಲ್ಲದ ಕನ್ನಡಿಗರಿಗೆ ಕೌಶಲ್ಯ ನೀಡಿ ಸಜ್ಜುಗೊಳಿಸುವ ಕೆಲಸವನ್ನೂ ಸರಕಾರವೇ ಮಾಡಲಿದೆ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು.

ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು  ಸಚಿವ ಎಂ.ಬಿ ಪಾಟೀಲ್ ಸ್ಪಷ್ಟ ಪಡಿಸಿದ್ದಾರೆ.

ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ. 'ಗ್ಲೋಬಲ್ ಚೈನಾ ಒನ್' ನೀತಿಯಿಂದ ಒದಗಿ ಬಂದಿರುವ ಸದಾವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ಎಂದು ಸಚಿವ ಎಂ.ಬಿ ಪಾಟೀಲ್ ಬಣ್ಣಿಸಿದರು.

Key words: Private sector, Employment, Kannadiga, Minister, MB Patil

Tags :
employmentkannadigaMB patilministerprivate sector
Next Article