HomeBreaking NewsLatest NewsPoliticsSportsCrimeCinema

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ: ಸಂಸದ ಯದುವೀರ್ ಪ್ರತಿಕ್ರಿಯೆ ಏನು?

04:07 PM Aug 17, 2024 IST | prashanth

ಮೈಸೂರು,ಆಗಸ್ಟ್,17,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್,  ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಕ್ರಮ ಕೈಗೊಂಡಿದ್ದಾರೆ‌ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಂಸದ ಯದುವೀರ್,  ಸಿದ್ದರಾಮಯ್ಯ ವಿಚಾರದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರು ಮುಂದೆ ಯಾವ ಕ್ರಮ ಕೈಗೊಳ್ಳಲಿದ್ದಾರೆಂದು ಕಾಯ್ದು ನೋಡಬೇಕಿದೆ. ವಾಲ್ಮೀಕಿ ನಿಗಮ ಮತ್ತು ಮುಡಾದಲ್ಲಿ ನಡೆದಿರುವ ಅಕ್ರಮಗಳ ಕುರಿತು ಬಿಜೆಪಿ ಹೋರಾಟ ನಡೆಸುತ್ತಾ ಬಂದಿತ್ತು. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದರಿಂದ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗುವ ವಿಶ್ವಾಸವಿದೆ ಎಂದರು.

ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದುದು. ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಕ್ರಮ ಕೈಗೊಂಡಿದ್ದಾರೆ‌. ಬಿಜೆಪಿ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಹೋರಾಟ ಮುಂದುವರಿಸಲಿದೆ. ಕಾನೂನಾತ್ಮಕವಾಗಿಯೂ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

Key words: prosecution, against, CM,  MP, Yaduveer

Tags :
againstCMMPprosecutionyaduveer
Next Article