HomeBreaking NewsLatest NewsPoliticsSportsCrimeCinema

ನಿಯಮಾನುಸಾರ ಸಣ್ಣ ಒತ್ತುವರಿದಾರರ ರಕ್ಷಣೆ- ಸಚಿವ ಈಶ್ವರ ಖಂಡ್ರೆ ಭರವಸೆ.

02:46 PM Jan 23, 2024 IST | prashanth

ಮೈಸೂರು, ಜನವರಿ,23,2024(www.justkannada.in):  ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ಮುನ್ನ ಅರಣ್ಯ ಭೂಮಿಯಲ್ಲಿ ಮೂರು ಎಕರಿಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಭರವಸೆ ನೀಡಿದ್ದರು.

ಮೈಸೂರಿನ ಜಲ ದರ್ಶಿನಿ ಅತಿಥಿಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ್ದ ಅಖಂಡ ಕರ್ನಾಟಕ ರೈತ ಒಕ್ಕೂಟದ ಸದಸ್ಯರಿಂದ ಮನವಿ ಸ್ವೀಕರಿಸಿ ಮಾತಾಡಿದ ಸಚಿವ ಈಶ್ವರ್ ಖಂಡ್ರೆ ಅವರು, ಕೆಲವರು ಸ್ವಾರ್ಥಕ್ಕಾಗಿ ಹತ್ತಾರು ಎಕರೆ ಅರಣ್ಯ ಒತ್ತುವರಿ ಮಾಡಿದ್ದು ಅಂತಹವರ ವಿರುದ್ಧ ಕ್ರಮ ವಹಿಸಲಾಗುವುದು ಎಂದರು.

ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ.ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆ ಸರ್ಕಾರದ ಹೊಣೆಯಾಗಿದೆ‌. ಅರಣ್ಯ ಭೂಮಿ ಕ್ಷೀಣಿಸಿದರೆ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತದೆ ಹೀಗಾಗಿ ಅರಣ್ಯ ಸಂರಕ್ಷಣೆ ನಿಮ್ಮ ಕರ್ತವ್ಯವೂ ಆಗಿದೆ ಎಂದರು.

ಈ ವೇಳೆ ಶಾಸಕರಾದ ದರ್ಶನ್ ಧ್ರುವನಾರಾಯಣ್ ಉಪಸ್ಥಿತರಿದ್ದರು.

Key words: Protection - small occupiers -per -rules- Minister- Eshwar Khandre

Tags :
Protection - small occupiers -per -rules- Minister- Eshwar Khandre
Next Article