ಮೈಸೂರಿನಲ್ಲಿ ರಾಜ್ಯಪಾಲರ ವಿರುದ್ಧ ಪ್ರತಿಭಟನೆ.
ಮೈಸೂರು,ಫೆಬ್ರವರಿ,1,2024(www.justkannada.in): ಕರ್ನಾಟಕದಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನ ತಿರಸ್ಕರಿಸಿದ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ದ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಮೈಸೂರಿನ ಡಾ.ರಾಜ ಕುಮಾರ್ ಪಾರ್ಕ್ ಮುಂಭಾಗ ಮೈಸೂರು ಕನ್ನಡ ವೇದಿಕೆ ವತಿಯಿಂದ ರಾಜ್ಯಪಾಲರ ವಿರುದ್ದ ಪ್ರತಿಭಟನೆ ನಡೆಯಿತು. ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ನಾಮಫಲಕ ಕಡ್ಡಾಯಕ್ಕೆ ಎಲ್ಲಾ ಪಕ್ಷಗಳು ಒಮ್ಮತ ಸೂಚಿಸಿದೆ. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಕನ್ನಡ ನಾಮಫಲಕ ಸುಗ್ರೀವಾಜ್ಞೆ ತಿರಸ್ಕಾರ ಮಾಡುವ ಮೂಲಕ ಕನ್ನಡ ವಿರೋಧಿತನ ಅನುಸರಿಸಿದ್ದಾರೆ.ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಲೇಬೇಕು.ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ಮಾಡಲಿವೆ ಎಂದು ಮೈಸೂರು ಕನ್ನಡ ವೇದಿಕೆ ಬಾಲಕೃಷ್ಣ ಎಚ್ಚರಿಸಿದರು.
Key words: Protest -against -Governor - Mysore.