For the best experience, open
https://m.justkannada.in
on your mobile browser.

ಮೇ 28 ರಂದು ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ- ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ.

05:09 PM May 24, 2024 IST | prashanth
ಮೇ 28 ರಂದು ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಬೆಂಗಳೂರು, ಮೇ, 24,2024 (www.justkannada.in):  ಬೆಂಗಳೂರಿನ ಅವ್ಯವಸ್ಥೆಗಳ ವಿರುದ್ಧ ಮೇ 28ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬೆಂಗಳೂರು ಮಹಾನಗರದ ಜನತೆಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ. ಕೇವಲ ನಾಮಕಾವಾಸ್ತೆ ಹೋರಾಟ ಇದಲ್ಲ. ಸಮಸ್ಯೆಗೆ ಪರಿಹಾರ, ಹೋರಾಟಕ್ಕೆ ಜಯ ಸಿಗಬೇಕಿದೆ. ಆ ನಿಟ್ಟಿನಲ್ಲಿ ಹೋರಾಟ ನಡೆಯಲಿದೆ ಎಂದು ಹೇಳಿದರು.

ಬೆಂಗಳೂರು ನಗರದಲ್ಲಿ ಕೇವಲ ಎರಡು ದಿನ ಮಳೆ ಬಂದಾಗ ರಸ್ತೆಗಳು ವಾಹನ ಓಡಾಡದಂತೆ ಬ್ಲಾಕ್ ಆಗಿದ್ದವು. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ಜನರಿದ್ದಾರೆ. ರಾಜ್ಯದಲ್ಲಿ ಹೊಸ ಸರಕಾರ ಬಂದ ಬಳಿಕ ಒಂದು ವರ್ಷದಲ್ಲಿ ಬೆಂಗಳೂರು ನಗರದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಟ್ಟಿಲ್ಲ ಎಂದು ಬಿವೈ ವಿಜಯೇಂದ್ರ ಟೀಕಿಸಿದರು.

Key words: protest, against, Govt, May 28, BY Vijayendra

Tags :

.