HomeBreaking NewsLatest NewsPoliticsSportsCrimeCinema

ಪಿಎಸ್ ಐ ನೇಮಕಾತಿ ಹಗರಣ: ಮಾಜಿ ಸಿಎಂ ಹೆಚ್.ಡಿಕೆ, ಶಾಸಕ ಯತ್ನಾಳ್ ಸೇರಿ ಹಲವು ರಾಜಕೀಯ ನಾಯಕರಿಗೆ ಸಮನ್ಸ್ ಜಾರಿ.

05:54 PM Dec 26, 2023 IST | prashanth

ಬೆಂಗಳೂರು,ಡಿಸೆಂಬರ್,26,2023(www.justkannada.in):  ಪಿಎಸ್‌ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಹಲವು ರಾಜಕೀಯ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಈ ಪ್ರಕರಣದ ವಿಚಾರಣೆಯನ್ನ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗ ನಡೆಸುತ್ತಿದೆ. ರಾಜಕೀಯ ನಾಯಕರು ತಮ್ಮ ಬಳಿ ಪಿಎಸ್‌ ಐ ನೇಮಕಾತಿ ಪರೀಕ್ಷೆ ಹಗರಣದ ಸಾಕ್ಷ್ಯಾಧಾರಗಳಿವೆ ಅಂತ ಹೇಳಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಿ, ಸಾಕ್ಷ್ಯಾಧಾರಗಳನ್ನು ಒದಗಿಸಲು ಸೂಚಿಸುವಂತೆ ದೂರುದಾರರು ಮನವಿ ಮಾಡಿದ್ದರು.

ದೂರುದಾರರ ಮನವಿಯನ್ನು ಪುರಸ್ಕರಿಸಿದ  ನ್ಯಾಯಮೂರ್ತಿ ಬಿ.ವೀರಪ್ಪ ಅವರ ತನಿಖಾ ಆಯೋಗ,  ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಸವರಾಜ ದಡೇಸೂರು, ಮಾಜಿ ಡಿಸಿಎಂ ಡಾ.ಸಿ.ಎನ್ ಅಶ್ವತ್ಥ ನಾರಾಯಣ್, ಸತೀಶ್ ಜಾರಕಿಹೊಳಿ ಸೇರಿದಂತೆ ವಿವಿಧ ರಾಜಕೀಯ ನಾಯಕರಿಗೆ ಸಮನ್ಸ್ ಜಾರಿಗೊಳಿಸಿದೆ.

ನ್ಯಾಯಮೂರ್ತಿ ಬಿ.ವೀರಪ್ಪ ಅವರ ಆಯೋಗ ಜಾರಿಗೊಳಿಸಿರುವ ಸಮನ್ಸ್ ನಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಸಾಕ್ಷ್ಯಾಧಾರಗಳಿದ್ದರೇ ಒದಗಿಸುವಂತೆ ಸೂಚಿಸಲಾಗಿದೆ.

Key words: PSI -Recruitment –Scam- Former CM- HDK- MLA –Yatnal-Summons

Tags :
MLAPSI -Recruitment –Scam- Former CM- HDKSummonsYatnal
Next Article