PSI ನೇಮಕಾತಿ ಅಕ್ರಮದ ತನಿಖಾ ವರದಿ ಸಿಎಂ ಸಿದ್ದರಾಮಯ್ಯಗೆ ಸಲ್ಲಿಕೆ.
01:26 PM Jan 22, 2024 IST
|
prashanth
ಬೆಂಗಳೂರು,ಜನವರಿ,22,2024(www.justkannada.in): ಪಿ.ಎಸ್.ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ರಾಜ್ಯದಲ್ಲಿ ನಡೆದ 545 ಪಿಎಸ್ ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸಿರುವ ಸಮಿತಿಯು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ತನಿಖಾ ವರದಿಯನ್ನು ಸಲ್ಲಿಸಿದೆ.
ಈ ವೇಳೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
Key words: PSI -recruitment - scam- investigation report -submitted - CM Siddaramaiah.
Next Article