HomeBreaking NewsLatest NewsPoliticsSportsCrimeCinema

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬರದೇ ಇರುವುದು ಲೇಸು- ಆರ್.ಅಶೋಕ್ ಲೇವಡಿ.

05:24 PM Jan 11, 2024 IST | prashanth

ಬೆಂಗಳೂರು,11,2024(www.justkannada.in): ಜನವರಿ 22 ರಾಮಮಂದಿರ ಉದ್ಘಾಟನೆ ದಿನ ಕಾಂಗ್ರೆಸ್ ನವರಿಗೆ ಬ್ಲ್ಯಾಕ್ ಡೇ. ಅವರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರದೇ ಇರುವುದು ಒಳ್ಳೆಯದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು.

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಗೈರಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಆರ್.ಅಶೋಖ್, ಕಾಂಗ್ರೆಸ್‌ನವರ ದುರ್ಬುದ್ಧಿ ಹಿಂದೆಯೇ ಕಂಡಿದ್ದೇವೆ. ರಾಮಾಯಣ ಕಾಲ್ಪನಿಕ, ರಾಮನೇ ಇಲ್ಲ ಎಂದು ಅವರು ನ್ಯಾಯಾಲಯದಲ್ಲಿ ವಾದ ಮಾಡಿದ್ದರು. ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಲಕ್ಷಾಂತರ ದಾಖಲೆಗಳು ಸಿಗುತ್ತದೆ. ಆದರೂ ರಾಮನ ಜನ್ಮ ಪ್ರಮಾಣಪತ್ರವನ್ನು ಕೇಳಿ ಪಾಪ ಕಟ್ಟಿಕೊಂಡ ಕಾಂಗ್ರೆಸ್‌ ನಾಯಕರು ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಬರದೇ ಇರುವುದು ಲೇಸು ಎಂದು ವ್ಯಂಗ್ಯವಾಡಿದರು.

ಎಲ್ ಕೆ ಅಡ್ವಾಣಿಯವರು ಮಂದಿರ ಕಟ್ಟಲು ಹೋರಾಟ  ಮಾಡಿದಾಗ ಅವರನ್ನು ಕಾಂಗ್ರೆಸ್‌ ನಾಯಕರು ಹಾಗೂ ಲಾಲೂ ಪ್ರಸಾದ್‌ ಯಾದವ್‌ ಜೈಲಿಗೆ ಕಳುಹಿಸಿದ್ದರು. ಆಗ ಜೈಲಿಗೆ ಕಳಿಸಿ ಈಗ ಅವರ ಪರ ಮಾತನಾಡುವ ಈ ನಾಯಕರಿಗೆ ಎರಡು ನಾಲಿಗೆ ಇದೆಯೇ ಎಂದು  ಆರ್.ಅಶೋಕ್ ಕಿಡಿಕಾರಿದರು.

Key words: R.Ashok - Congress - not coming - Ram Mandir -inauguration.

Tags :
R.Ashok - Congress - not coming - Ram Mandir -inauguration.
Next Article