For the best experience, open
https://m.justkannada.in
on your mobile browser.

ಬೆಂಗಳೂರನಲ್ಲಿ ಮಳೆಯ ಅವಾಂತರ: ಮಳೆಹಾನಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುತ್ತೇವೆ-ಡಿಸಿಎಂ ಡಿಕೆ ಶಿವಕುಮಾರ್.

11:53 AM Jun 03, 2024 IST | prashanth
ಬೆಂಗಳೂರನಲ್ಲಿ ಮಳೆಯ ಅವಾಂತರ  ಮಳೆಹಾನಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುತ್ತೇವೆ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,3,2024 (www.justkannada.in): ನಿನ್ನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆರಾಯ ಅವಾಂತರ ಸೃಷ್ಠಿಸಿದ್ದು,  ನಗರದಲ್ಲಿ 110.7 ಮಿಲಿ ಮೀಟರ್ ಮಳೆಯಾಗಿದೆ. ರಾತ್ರಿ ಸುರಿದ ಮಳೆಗೆ 206 ಮರಗಳು ಧರೆಗುರುಳಿವೆ.

ಬಿರುಗಾಳಿ ಮಳೆಗೆ ಬೆಂಗಳೂರಿನ ಹಲವಡೆ ಮರಗಳು ಧರೆಗುರುಳಿವೆ. ಬಸವೇಶ್ವರನಗರದಲ್ಲಿ ಮರದ ಕೊಂಬೆ ಬಿದ್ದು, ಪಾನಿಪುರಿ ಅಂಗಡಿಗೆ ಹಾನಿಯಾಗಿದೆ. ಜಯನಗರದಲ್ಲಿ ಮರದ ಕೊಂಬೆ ಬೀಳುತ್ತಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಕೋರಮಂಗಲ ಬಳಿ ವಿದ್ಯುತ್‌ ಕಂಬ, ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದಿದೆ.

ಗಿರಿನಗರದ 13ನೇ ಕ್ರಾಸ್​ನಲ್ಲಿ ಬೃಹತ್ ಗಾತ್ರದ ಮರ ಉರುಳಿಬಿದ್ದಿದ್ದರಿಂದ ಕಾರು ನಜ್ಜುಗುಜ್ಜಾಗಿದ್ವು. ಮರದಡಿ ಸಿಲುಕಿ 2 ಬೈಕ್​ಗಳು ಜಖಂ ಆಗಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ರಾಮಕೃಷ್ಣ ಆಶ್ರಮ ಬಳಿ ಬೃಹತ್ ಮರ ಬಿದ್ದು ಕಾರು ಜಖಂಗೊಂಡಿದೆ.

ಹೀಗೆ ನಗರದಾದ್ಯಂತ ಮಳೆಯರಾಯ ಅವಾಂತರ ಸೃಷ್ಠಿಸಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ. ಮಳೆಹಾನಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇವೆ. ಎಲ್ಲೆಲ್ಲಿ ಸಮಸ್ಯೆ ಆಗಿದೆಯೋ ಅಲ್ಲಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದರು.

Key words: Rain, disaster, Bangalore, DK Shivakumar

Tags :

.