ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ.
ಬೆಂಗಳೂರು, ಮೇ, 4,2024 (www.justkannada.in): ರಾಜ್ಯ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವಡೆ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಕೊಡಗು ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಮೇ 7ರ ಬಳಿಕ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಳವಾಗಲಿದೆ. ಇತ್ತ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಮೇ 7 ಮತ್ತು 8ರ ನಂತರ ಬೆಂಗಳೂರಲ್ಲಿ ಮಳೆ ಹೆಚ್ಚಳವಾಗುವ ಸಂಭವವಿದೆ. ಇನ್ನು ಮುಂದಿನ ಮೂರು ದಿನ ಕೂಡ ಉಷ್ಣಾಂಶ ಗರಿಷ್ಠ 38°, ಕನಿಷ್ಠ 24° ತಾಪಮಾನ ಮುಂದುವರಿಯಲಿದ್ದು, ಉಷ್ಣಾಂಶ ಹಿನ್ನಲೆ ಬಿಸಿ ಹಾಗೂ ಆರ್ದ್ರ ವಾತಾವರಣ ಇರಲಿದೆ.
ಮೇ 19ರ ವರೆಗೆ ಆಗಾಗ ಮಳೆ ಹಾಗೂ 19ರ ನಂತರ ಸತತ ಮೂರು ವಾರಗಳ ಮಳೆ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯು ಎಕ್ಸ್ ಖಾತೆ ಮೂಲಕ ಮಾಹಿತಿ ಹಂಚಿಕೊಂಡಿದೆ.
Key words: rain, three days, Meteorological department