ಗುಡ್ಡ, ಭೂ ಕುಸಿತ: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಗೆ ನಿಷೇಧ
ಚಿಕ್ಕಮಗಳೂರು,ಜುಲೈ,22,2024 (www.justkannada.in): ಈ ಬಾರಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು ಸಾಲು ಸಾಲು ಗುಡ್ಡ, ಭೂಕುಸಿತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡದಂತೆ ನಿಷೇಧ ಹೇರಲಾಗಿದೆ.
ಈ ಕುರಿತು ಮಾತನಾಡಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ , ಮುಳ್ಳಯ್ಯನಗಿರಿಯಲ್ಲಿ ಸಾಲು ಸಾಲು ಗುಡ್ಡ ಮತ್ತು ಭೂ ಕುಸಿತವಾಗಿದೆ. ಹೀಗಾಗಿ ಪ್ರವಾಸಿಗರು ಜಿಲ್ಲೆಗೆ ಪ್ರವಾಸ ಬರುವುದನ್ನ ಮುಂದುಡಬೇಕು. ಜುಲೈ 29 ರವರೆಗೂ ಚಂದ್ರದ್ರೋಣ ಪರ್ವತದ ಸಾಲಿನ ತಾಣಗಳಿಗೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನ ಹಳ್ಳ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.
ಜುಲೈನಲ್ಲಿ ಅತಿ ಹೆಚ್ಚು ಮಳೆಯಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇಕಡಾ 25ರಷ್ಟು ಹೆಚ್ಚು ಮಳೆಯಾಗಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಭಾರಿ ಮಳೆಯಾಗಿದೆ. ಮಳೆ ಗಾಳಿಗೆ ಮೂಡಿಗೆರೆ, ಚಿಕ್ಕಮಗಳೂರು ತಾಲೂಕಿನಲ್ಲಿ 192 ಮನೆಗಳಿಗೆ ಹಾನಿಯಾಗಿದೆ. ಈವರೆಗೂ ಹಾನಿಗೊಳಗಾದ 77 ಮನೆಗಳಿಗೆ ಪರಿಹಾರ ನೀಡಲಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ 1,849 ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿದೆ ಎಂದು ಮಾಹಿತಿ ನೀಡಿದರು.
Key words: rain, tourist, Chikmagalur, Chandradrona Hill