HomeBreaking NewsLatest NewsPoliticsSportsCrimeCinema

ನಾಳೆಯಿಂದ ಮೇ 12ರವರೆಗೆ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

10:34 AM May 06, 2024 IST | prashanth

ಬೆಂಗಳೂರು,ಮೇ,6,2024 (www.justkannada.in): ರಾಜ್ಯದಲ್ಲಿ ನಾಳೆಯಿಂದ ಮೇ 12ರವರೆಗೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿ ಕರ್ನಾಟಕದ ಹಲವು  ಜಿಲ್ಲೆಗಳಲ್ಲಿ ಮೇ7ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಇಂದು ಮಳೆಯಾಗಲಿದೆ.

ಬೀದರ್​, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಮೇ 8ರ ಬಳಿಕ ಮಳೆಯಾಗಲಿದೆ. ಭಾನುವಾರ ಚಾಮರಾಜನಗರದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 44.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಅಥವಾ ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಮೋಡಕವಿದ ವಾತಾವರಣ ನಿರ್ಮಾಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Key words: Rain,state , department ,forecast

Tags :
Rain -state - department forecast
Next Article