ಬ್ರೇಕ್ ಫೇಲ್ ಆಗಿ ಪಲ್ಟಿಯಾದ ರಾಜಹಂಸ ಬಸ್: 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ.
06:31 PM Apr 16, 2024 IST
|
prashanth
ಬೆಳಗಾವಿ,ಏಪ್ರಿಲ್,16,2024 (www.justkannada.in): ಬ್ರೇಕ್ ಫೇಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಮ್ಮಾಪುರ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್ ತಿಮ್ಮಾಪುರ ಏಕಾಏಕಿ ಬ್ರೇಕ್ ಫೇಲ್ ಆಗಿದ್ದು, ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ. ಘಟನೆಯಲ್ಲಿ ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ, 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಪಲ್ಟಿಯಾದ ಕೂಡಲೇ ಸ್ಥಳಕ್ಕೆ ಸ್ಥಳೀಯರು ಆಗಮಿಸಿ ಬಸ್ ನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Rajahansa bus, brake, failure, injured
Next Article