HomeBreaking NewsLatest NewsPoliticsSportsCrimeCinema

BREAKING NOW: ಸಂಗೀತ ಲೋಕದ ಧ್ರುವತಾರೆ, ವಿಶ್ವದ ಶ್ರೇಷ್ಠ ಸರೋದ್‌ ವಾದಕರಲ್ಲಿ ಒಬ್ಬರೆನಿಸಿರುವ ರಾಜೀವ್ ತಾರಾನಾಥ್‌ ಇನ್ನಿಲ್ಲ.

07:27 PM Jun 11, 2024 IST | mahesh

 

ಮೈಸೂರು, ಜೂ.11,2024 : (www.justkannada.in news)  ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾಜೀವ್‌ ತಾರಾನಾಥ್‌ ಇಂದು ನಿಧನರಾದರು.

ಕೆಲ ದಿನಗಳ ಹಿಂದೆ, ಅವರ ಅನಾರೋಗ್ಯದ ಸುದ್ಧಿ ತಿಳಿದು ರಾಜ್ಯ ಸರಕಾರವೇ ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ತೀರ್ಮಾನಿಸಿತ್ತು. ಮೈಸೂರು ಉಸ್ತುವಾರಿ ಸಚಿವ ಡಾ. ಮಹಾದೇವಪ್ಪ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದರು.

ಆದರೆ, ಇದೀಗ ವೈದ್ಯರ ಚಿಕಿತ್ಸೆಗೆ ಸ್ಪಂಧಿಸದೆ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರು ಇಹಲೋಕ ತ್ಯಜಿಸಿದರು.

 

ರಾಜೀವ್ ತಾರಾನಾಥ್ :

ರಾಜೀವ್ ತಾರಾನಾಥರು ಜನಿಸಿದ ದಿನ ಅಕ್ಟೋಬರ್ ೧೭, ೧೯೩೨. ಅತ್ಯಂತ ಸರಳತೆ ಮತ್ತು ಶ್ರೇಷ್ಠ ಸಂಗೀತಕ್ಕೆ ಹೆಸರಾದವರು ನಮ್ಮ ಕರ್ನಾಟಕದವರೇ ಆದ ರಾಜೀವ್ ತಾರಾನಾಥರು.

ರಾಜೀವ್ ತಾರಾನಾಥರು ತಮ್ಮ ಪ್ರಾರಂಭಿಕ ಪಾಠಗಳನ್ನು ತಮ್ಮ ತಂದೆ ಪಂಡಿತ ತಾರಾನಾಥ್‌ ರಿಂದ ಪಡೆದರು. ಕೇವಲ ಒಂಭತ್ತು ವರ್ಷದವರಿದ್ದಾಗ ಅವರು ಪ್ರಥಮ ಸಂಗೀತ ಕಚೇರಿಯನ್ನು ನಡೆಸಿದರು. ಇಪ್ಪತ್ತರ ತಾರುಣ್ಯದಲ್ಲಿ ಆಕಾಶವಾಣಿಯಲ್ಲಿ ಸಂಗೀತಗಾರರಾಗಿ ಹಾಡುತ್ತಿದ್ದರು.

ರಾಜೀವ್ ತಾರಾನಾಥರು ಸಾಹಿತ್ಯದಲ್ಲಿ ಪಿ.ಎಚ್.ಡಿ ಪದವಿ ಪಡೆದವರಾದರೂ, ತಮಗಿದ್ದ ಇಂಗ್ಲಿಷ್ ಪ್ರಾಧ್ಯಾಪಕತನವನ್ನು ತ್ಯಜಿಸಿ, ಸಂಗೀತವನ್ನು ಅಭ್ಯಸಿಸಲು ಕೊಲ್ಕೊತ್ತಾಗೆ ತೆರಳಿ ಅಲ್ಲಿ ಉಸ್ತಾದ್ ಆಲಿ ಅಕ್ಬರ್‌ ಖಾನ್‌ ಅವರ ಶಿಷ್ಯರಾದರು.

2009ರ ವರ್ಷದಲ್ಲಿ ಅಲಿ ಅಕ್ಬರ್ ಖಾನರು ನಿಧನರಾಗುವವರೆಗೆ ರಾಜೀವ್ ತಾರಾನಾಥರು ಅವರ ಶಿಷ್ಯರಾಗಿಯೇ ಮುಂದುವರೆದಿದ್ದರು.

ಕ್ಯಾಲಿಪೋರ್ನಿಯಾ ವಿವಿಯ ಕಲಾವಿಭಾಗದ ಮುಖ್ಯಸ್ಥರಾಗಿ ೧೯೯೫ರಿಂದ ೨೦೦೫ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ರಾಜೀವ ತಾರಾನಾಥರು ಬಳಿಕ ಮೈಸೂರಿನ ನಿವಾಸಿಯಾಗಿದ್ದು ತಮ್ಮ ಶಿಷ್ಯರಿಗೆ ಸಂಗೀತವನ್ನು ಧಾರೆ ಎರೆಯುತ್ತಿದ್ದರು.

ಹಲ ಪ್ರಖ್ಯಾತ ಚಲನಚಿತ್ರಗಳಿಗೂ ಸಂಗೀತ ನೀಡಿರುವ ರಾಜೀವ್ ತಾರಾನಾಥರ ನಿರ್ದೇಶನದಲ್ಲಿ ಮೂಡಿಬಂದ ಪ್ರಮುಖ ಚಿತ್ರಗಳೆಂದರೆ ಕನ್ನಡದ ಸಂಸ್ಕಾರ,  ಪಲ್ಲವಿ, ಅನುರೂಪ, ಶೃಂಗಾರ ಮಾಸ, ಪೇಪರ್ ಬೋಟ್, ಮಲಯಾಳಂನ ಕಾಂಚನ ಸೀತಾ ಮತ್ತು ಕಟವ್ ಮುಂತಾದ ಚಿತ್ರಗಳು.

keywords : rajeev,tharanath, no more, died in Mysore, private hospital

 

Tags :
died in Mysoreno more.private hospitalRajeevtharanath
Next Article