ರಾಜ್ಯಸಭೆ ಚುನಾವಣೆ: 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ- ಮಾಜಿ ಸಿಎಂ ಹೆಚ್.ಡಿಕೆ.
10:59 AM Feb 15, 2024 IST
|
prashanth
ಬೆಂಗಳೂರು, ಫೆಬ್ರವರಿ 15,2024(www.justkannada.in): ರಾಜ್ಯಸಭೆ ಚುನಾವಣೆಗೆ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕಿಳಿಸಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.
ಈ ಕುರಿತು ಮಾತನಾಡಿ ಹೆಚ್.ಡಿ ಕುಮಾರಸ್ವಾಮಿ, ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿಯ ರಾಷ್ಟ್ರೀಯ, ರಾಜ್ಯ ನಾಯಕರ ಸಲಹೆ ಮೇರೆಗೆ ಎನ್ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಬಿಜೆಪಿಯಲ್ಲಿ ಹೆಚ್ಚುವರಿ ಮತಗಳಿವೆ. ವಿಪಕ್ಷದ ಮತಗಳು ನಷ್ಟವಾಗಬಾರದು . ಹೆಚ್ಚುವರಿ ವೋಟ್ ಕುಪೇಂದ್ರಗೆ ವರ್ಗಾವಣೆ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಈ ಕಾರಣಕ್ಕೆ ಈ ತೀರ್ಮಾನ ಮಾಡಲಾಗಿದೆ ಎಂದು ಹೆಚ್.ಡಿಕೆ ಹೇಳಿದರು.
Key words: RajyaSabha –Election-Kupendra Reddy - 5th candidate- Former CM -H.D kumaraswamy
Next Article