For the best experience, open
https://m.justkannada.in
on your mobile browser.

ಯುವತಿ ಮೇಲೆ ಅತ್ಯಾಚಾರ: ಆರೋಪಿಗಳ ಬಂಧನ

10:43 AM Aug 24, 2024 IST | prashanth
ಯುವತಿ ಮೇಲೆ ಅತ್ಯಾಚಾರ  ಆರೋಪಿಗಳ ಬಂಧನ

ಉಡುಪಿ, ಆಗಸ್ಟ್​ 24,2024 (www.justkannada.in): ಪುಸಲಾಯಿಸಿ ಯುವತಿ  ಕರೆದುಕೊಂಡು ಹೋಗಿ ಮಾದಕ ಪದಾರ್ಥ ನೀಡಿ ಅತ್ಯಾಚಾರವೆಸಗಿದ್ದ ಆರೋಪಿಗಳನ್ನ ಕಾರ್ಕಳ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ಅಲ್ತಾಫ್ ಸೇರಿ ಇಬ್ಬರನ್ನು ಕಾರ್ಕಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯುವತಿ ತಾಯಿಯ ದೂರು ಆಧರಿಸಿ ಮೂವರು ಆರೋಪಿಗಳ ವಿರುದ್ಧ ಎಫ್ ​ಐಆರ್​ ದಾಖಲಾಗಿದೆ.

ಸಂತ್ರಸ್ತ ಯುವತಿಗೆ ಅಲ್ತಾಫ್​​ ಇನ್​ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದನು. ಈ ನಡುವೆ ನಿನ್ನೆ ಅಲ್ತಾಫ್​ ಯುವತಿಯನ್ನು ಪುಸಲಾಯಿಸಿ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ. ಯುವತಿಗೆ ಮಾದಕ ವಸ್ತು ನೀಡಿ, ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಸಂಜೆಯಾಗುತ್ತಲೇ ಯುವತಿಯನ್ನ ವಾಪಸ್ ಆಕೆಯ ಮನೆಗೆ ಕರೆ ತಂದಿದ್ದು. ಈ ವೇಳೆ ಹಿಂದೂ ಕಾರ್ಯಕರ್ತರು ಕಾರು ಅಡ್ಡಗಟ್ಟಿದ್ದಾರೆ. ಕಾರಿನಲ್ಲಿದ್ದ ಯುವತಿ ನಶೆಯಲ್ಲಿರುವುದನ್ನು ಕಂಡ ಪೋಷಕರು ಮತ್ತು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಯುವತಿ ತಾಯಿ ಕಾರ್ಕಳ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು,  ಆರೋಪಿ ಅಲ್ತಾಫ್​ ನನ್ನು ಪೊಲೀಸರು ಬಂಧಿಸಿದ್ದಾರೆ.

Key words: Rape, young woman, Accused, arrested

Tags :

.