For the best experience, open
https://m.justkannada.in
on your mobile browser.

ರೇಣುಕಾಸ್ವಾಮಿ ಹತ್ಯೆ ಕೇಸ್ ಗಂಭೀರವಾಗಿ ತೆಗೆದುಕೊಳ್ಳಿ: ಚುರುಕುತನ, ನಿಯತ್ತಿನಿಂದ ತನಿಖೆ ನಡೆಸಿ- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

11:40 AM Jun 13, 2024 IST | prashanth
ರೇಣುಕಾಸ್ವಾಮಿ ಹತ್ಯೆ ಕೇಸ್ ಗಂಭೀರವಾಗಿ ತೆಗೆದುಕೊಳ್ಳಿ  ಚುರುಕುತನ  ನಿಯತ್ತಿನಿಂದ ತನಿಖೆ ನಡೆಸಿ  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ,ಜೂನ್,13,2024 (www.justkannada.in):  ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ಸೇರಿ 13 ಮಂದಿಯನ್ನ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಈ ಕುರಿತು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, ಕಾನೂನಿನ ಮುಂದೆ ಎಲ್ಲರೂ ಸಮಾನರು.  ಕಾನೂನು ಕೈಗೆ ತೆಗೆದುಕೊಳ್ಳುವುದೇ ಒಂದು ಅಪರಾಧ. ರೇಣುಕಾಸ್ವಾಮಿ ಮರ್ಡರ್ ಪ್ರಕರಣ ಗಂಭೀರವಾಗಿ ತೆಎದುಕೊಳ್ಳಿ.  ಚುರುಕುತನ ನಿಯತ್ತಿನಿಂದ ತನಿಖೆ ನಡೆಸಬೇಕು.  ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ ಈ ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಬೇಕು. ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದರು.

ದರ್ಶಣ್ ಕೇಸ್ ನಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೆಯುತ್ತಿದೆ ಕೊನೆವರೆಗೂ ಇದೇ ಚುರುಕುತನ  ನಿಯತ್ತು ಇರಲಿ. ನಿಯತ್ತಿನ ತನಿಖೆ ಇದ್ದರೇ ಮಾತ್ರ ಆರೋಪಿಗಳಿಗೆ ಶಿಕ್ಷೆಯಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದರು.

Key words: Renukaswamy, murder, case, Basavaraja Bommai.

Tags :

.