For the best experience, open
https://m.justkannada.in
on your mobile browser.

ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನ ರಕ್ಷಣೆ: ಸಿಬ್ಬಂದಿಗಳ ಕಾರ್ಯಾಚರಣೆ ಪ್ರಶಂಸಿಸಿದ ಸಿಂ ಸಿದ್ದರಾಮಯ್ಯ.

03:44 PM Apr 04, 2024 IST | prashanth
ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನ ರಕ್ಷಣೆ  ಸಿಬ್ಬಂದಿಗಳ ಕಾರ್ಯಾಚರಣೆ ಪ್ರಶಂಸಿಸಿದ ಸಿಂ ಸಿದ್ದರಾಮಯ್ಯ

ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನ ರಕ್ಷಣೆ: ಸಿಬ್ಬಂದಿಗಳ ಕಾರ್ಯಾಚರಣೆ ಪ್ರಶಂಸಿಸಿದ ಸಿಂ ಸಿದ್ದರಾಮಯ್ಯ. ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ - ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು.

ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

Key words: Rescue, boy , well, CM-Siddaramaiah

Tags :

.