ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧ.
ಬೆಂಗಳೂರು, ಫೆಬ್ರವರಿ 15,2024(www.justkannada.in): ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿದೆ.
ಸಮಾಜ ಕಲ್ಯಾಣ ಸಚಿವ ಹೆಚ್ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ ಎನ್ನಲಾಗಿದೆ . ಅದರಂತೆ, 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಶಾಲೆ, ಕಾಲೇಜುಗಳಲ್ಲಿ ಆಚರಿಸಬಹುದು. ಎಲ್ಲಾ ವಸತಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕು ಎಂದು ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ.
ಯುಗಾದಿ, ರಂಜಾನ್, ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾತಿ ಸೇರಿದಂತೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಶಾಲೆ ಮತ್ತು ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
Key words: Restrictions - celebration -f religious festivals - government residential schools -colleges.