For the best experience, open
https://m.justkannada.in
on your mobile browser.

6 ದಿನಗಳ ಕಾಲ ಚಿಕ್ಕಮಗಳೂರಿನ ಈ ಪ್ರವಾಸಿತಾಣಗಳಿಗೆ ನಿರ್ಬಂಧ.

11:30 AM Dec 22, 2023 IST | prashanth
6 ದಿನಗಳ ಕಾಲ ಚಿಕ್ಕಮಗಳೂರಿನ ಈ ಪ್ರವಾಸಿತಾಣಗಳಿಗೆ ನಿರ್ಬಂಧ

ಚಿಕ್ಕಮಗಳೂರು,ಡಿಸೆಂಬರ್,22,2023(www.justkannada.in): ದತ್ತಪೀಠದಲ್ಲಿ ದತ್ತಜಯಂತಿ ನಡೆಯುವ ಹಿನ್ನೆಲೆ  ಡಿಸೆಂಬರ್ 22 ರಿಂದ 27ರವರೆಗೆ 6 ದಿನಗಳ ಕಾಲ ಚಿಕ್ಕಮಗಳೂರಿನ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ, ದತ್ತಪೀಠದಲ್ಲಿ ಡಿಸೆಂಬರ್​ 24, 25 ಮತ್ತು 26ರಂದು ದತ್ತಜಯಂತಿ ನಡೆಯಲಿದೆ. ಹೀಗಾಗಿ ಡಿಸೆಂಬರ್ 22ರಿಂದ 27ರವರೆಗೆ ಈ ಪ್ರದೇಶದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.

ಡಿಸೆಂಬರ್ 23, 24 ವಾರಾಂತ್ಯ ಇದೆ. 25ರಂದು ಸೋಮವಾರ ಕ್ರಿಸ್ಮಸ್ ಪ್ರಯುಕ್ತ ರಜೆ ಇದೆ. ಹೀಗಾಗಿ ಅನೇಕರು ಪ್ರವಾಸಕ್ಕೆ ಬರುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ತಿಳಿಸಿದೆ.

ಇನ್ನು 3 ದಿನ ಮದ್ಯ ಮಾರಾಟವನ್ನೂ ಕೂಡ ನಿಷೇಧಿಸಲಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ಶೃಂಗೇರಿ ಕೊಪ್ಪ ಎನ್ ಆರ್ ಪುರದಲ್ಲಿ ಮದ್ಯ ನಿಷೇಧ ಹೇರಲಾಗಿದೆ.

Key words: Restrictions - tourist -spots -Chikkamagaluru - 6 days.

Tags :

.