ತೆಲಂಗಾಣ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ: ಸೋನಿಯಾ ಗಾಂಧಿ ಸೇರಿ ಹಲವು ನಾಯಕರು ಭಾಗಿ.
01:47 PM Dec 07, 2023 IST
|
prashanth
ಹೈದರಾಬಾದ್,ಡಿಸೆಂಬರ್,7,2023(www.justkannada.in): ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಶಾಸಕ ರೇವಂತ್ ರೆಡ್ಡಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು. ನೂತನ ಡಿಸಿಎಂ ಆಗಿ ಮಲ್ಲುಭಟ್ಟಿ ವಿಕ್ರಮಾರ್ಕ ಹಾಗೂ 11 ಮಂದಿ ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದರು. ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಿಯಾಂಕಗಾಂಧಿ , ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವರು ಭಾಗಿಯಾಗಿದ್ದರು.
Key words: Revanth Reddy -oath - new CM – Telangana
Next Article