ನಾಳೆ ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ: ಕಾಂಗ್ರೆಸ್ ನಾಯಕರಿಗೆ ಆಹ್ವಾನ.
01:24 PM Dec 06, 2023 IST
|
prashanth
ತೆಲಂಗಾಣ,ಡಿಸೆಂಬರ್,6,2023(www.justkannada.in): ನಾಳೆ ತೆಲಂಗಾಣ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನಾಳೆ ಮಧ್ಯಾಹ್ನ 1 ಗಂಟೆ 4ನಿಮಿಷಕ್ಕೆ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರನ್ನ ಭೇಟಿಯಾಗಿರುವ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವರಿಷ್ಟೆ ಸೋನಿಯಾ ಗಾಂಧಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಿಯಾಂಕ್ ಗಾಂಧಿ ಭಾಗಿಯಾಗುವ ಸಾಧ್ಯತೆ ಇದೆ. ಕಾರ್ಯಕ್ರಮದ ಬಳಿಕ ಕೃತಜ್ಞತಾ ಸಭೆ ನಡೆಯಲಿದೆ.
Key words: Revanth Reddy - oath - Telangana CM –tomorrow
Next Article